ಎಸ್‌ಐಆರ್ | ವಿಜಯನಗರ ಜಿಲ್ಲೆಯಲ್ಲಿ ಶೇ.73.46 ಡಿಜಿಟಲೀಕರಣ ಪೂರ್ಣ

11.42 ಲಕ್ಷ ಗಣತಿ ನಮೂನೆಗಳ ವಿತರಣೆ

Update: 2026-07-21 20:48 IST

ವಿಜಯನಗರ (ಹೊಸಪೇಟೆ), ಜು.21: ಜಿಲ್ಲೆಯ ಐದು ತಾಲೂಕುಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಈವರೆಗೆ 11,42,732 ಗಣತಿ ನಮೂನೆಗಳನ್ನು 1,234 ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಶೇ.100ರಷ್ಟು ವಿತರಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ಜೂನ್ 30ರಿಂದ ಆರಂಭಗೊಂಡಿರುವ ಈ ವಿಶೇಷ ಅಭಿಯಾನವು ಆಗಸ್ಟ್ 8ರವರೆಗೆ ನಡೆಯಲಿದ್ದು, ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದು ಹಾಗೂ ನಮೂನೆಗಳ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗುತ್ತಿದೆ.

ಈವರೆಗೆ ವಿತರಿಸಲಾದ ನಮೂನೆಗಳ ಪೈಕಿ 8,38,492 (ಶೇ.73.46) ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಅಲ್ಲದೆ 2,790 (ಶೇ.0.24) ಮತದಾರರು ಸ್ವಯಂ ಆನ್‌ಲೈನ್ ಮೂಲಕ ತಮ್ಮ ನಮೂನೆಗಳನ್ನು ಸಲ್ಲಿಸಿದ್ದಾರೆ.

ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 16,220 ಮೃತ ಮತದಾರರು ಹಾಗೂ 14,364 ಶಾಶ್ವತವಾಗಿ ಸ್ಥಳಾಂತರಗೊಂಡ ಮತದಾರರನ್ನು ಗುರುತಿಸಲಾಗಿದೆ. ಜೊತೆಗೆ 5,876 ಮತದಾರರ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, 246 ಸಂಪರ್ಕಕ್ಕೆ ಸಿಗದ ಅಥವಾ ಅಲಭ್ಯವಿರುವ ಮತದಾರರನ್ನು ಸಹ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News