ವಿಜಯನಗರ ಜಿಲ್ಲೆಯಲ್ಲಿ ಎಸ್‌ಐಆರ್ ಅಭಿಯಾನ : ಶೇ.86.88 ನಮೂನೆಗಳ ಡಿಜಿಟಲೀಕರಣ ಪೂರ್ಣ

Update: 2026-08-05 20:36 IST

ವಿಜಯನಗರ (ಹೊಸಪೇಟೆ), ಆ.5: ಜಿಲ್ಲೆಯ ಐದು ತಾಲೂಕುಗಳಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನ ವೇಗವಾಗಿ ನಡೆಯುತ್ತಿದ್ದು, ಈವರೆಗೆ 11,42,732 ಮತದಾರರ ಮಾಹಿತಿ (ಇ-ಫಾರ್ಮ್) ನಮೂನೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ಜೂನ್ 30ರಿಂದ ಆರಂಭಗೊಂಡಿರುವ ಈ ಅಭಿಯಾನ ಆಗಸ್ಟ್ 8ರವರೆಗೆ ನಡೆಯಲಿದ್ದು, ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಹಾಗೂ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗುತ್ತಿದೆ.

ವಿತರಿಸಲಾದ ನಮೂನೆಗಳ ಪೈಕಿ 9,92,764 (ಶೇ.86.88) ನಮೂನೆಗಳನ್ನು ಈಗಾಗಲೇ ಡಿಜಿಟಲೀಕರಣಗೊಳಿಸಲಾಗಿದೆ. ಇದಲ್ಲದೆ, 3,042 (ಶೇ.0.27) ಮತದಾರರು ಸ್ವತಃ ಆನ್‌ಲೈನ್ ಮೂಲಕ ಮಾಹಿತಿ ನಮೂನೆಗಳನ್ನು ಸಲ್ಲಿಸಿದ್ದಾರೆ.

ಬಿಎಲ್‌ಒಗಳ ಪರಿಶೀಲನೆ ವೇಳೆ ಜಿಲ್ಲೆಯಲ್ಲಿ 38,335 ಮೃತ ಮತದಾರರು ಹಾಗೂ ಶಾಶ್ವತವಾಗಿ ಸ್ಥಳಾಂತರಗೊಂಡಿರುವ 69,511 ಮತದಾರರನ್ನು ಗುರುತಿಸಲಾಗಿದೆ. ಜೊತೆಗೆ 18,701 ಮತದಾರರು ಈಗಾಗಲೇ ದಾಖಲಾಗಿರುವುದು ಹಾಗೂ 22,953 ಮತದಾರರು ಸಂಪರ್ಕಕ್ಕೆ ಸಿಗದ ಅಥವಾ ಅಲಭ್ಯರಾಗಿರುವುದು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News