×
Ad

ಜು.29 ರಂದು ಉಜ್ಜಿನಿಯಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Update: 2025-07-28 21:12 IST

ವಿಜಯನಗರ(ಹೊಸಪೇಟೆ) : ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದ ಶ್ರೀಉಜ್ಜಿನಿ ಮರಳುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜು.29 ರಂದು, ಬೆಳಗ್ಗೆ 11 ಗಂಟೆಗೆ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ‘ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ’ವನ್ನು ಆಯೋಜಿಸಲಾಗಿದೆ.

ಜನಸ್ಪಂದನಾ ಕಾರ್ಯಕ್ರಮದಲ್ಲಿ ಆಯಾ ಇಲಾಖಾವಾರು ಅಹವಾಲು ಕೇಂದ್ರಗಳನ್ನು ಕೌಂಟರ್‌ಗಳ ಮೂಲಕ ತೆರೆಯಲಾಗಿರುತ್ತದೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಆಹವಾಲುಗಳಿದ್ದಲ್ಲಿ ಸಭೆಯಲ್ಲಿ ಸಲ್ಲಿಸಬಹುದು. ಸರಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚನೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News