×
Ad

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2025-05-16 16:43 IST

ಹೊಸಪೇಟೆ (ವಿಜಯನಗರ) : ರಾಜ್ಯ ಸರ್ಕಾರದ ಎರಡು ವರ್ಷದ ಆಡಳಿತ ಅವಧಿಯಲ್ಲಿ ಪೂರೈಸಿದ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರದ ಸಾಧನ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ  ಹಾಗೂ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ಸುರ್ಜವಾಲಾ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.

ಈ ವೇಳೆ ಒಂದು ಲಕ್ಷದ ಹಕ್ಕುಪತ್ರಗಳನ್ನು ನೀಡಲಾಗುವುದು. ಬಳ್ಳಾರಿ ಕೊಪ್ಪಳ ವಿಜಯನಗರ ರಾಯಚೂರು ಸೇರಿದಂತೆ ಇತರ ಜಿಲ್ಲೆಗಳಿಂದ ಶಾಸಕರು ಸಚಿವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಇಲ್ಲಿ ವ್ಯಕ್ತಿ ಪೂಜೆ ಇಲ್ಲ, ಪಕ್ಷ ಪೂಜೆ ಮಾತ್ರ. ವಿಜಯನಗರ ಜಿಲ್ಲೆಯಲ್ಲಿ ಕಾರ್ಯಕ್ರಮ ಮಾಡುವುದರಿಂದ ವಿಜಯ ಆಗುತ್ತೆ. ಈ ನೆಲೆಯಲ್ಲಿ ವಿಜಯನಗರ ಕ್ಷೇತ್ರಕ್ಕೆ ವಿಜಯನಗರ ಜಿಲ್ಲೆಗೆ ಹೆಚ್ಚಿನ ಶಕ್ತಿ ತುಂಬುವ ಸಲುವಾಗಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News