×
Ad

ವಿಜಯನಗರ: ಅಟಲ್‌ಜೀ ಮೃಗಾಲಯದಲ್ಲಿನ ಹೆಣ್ಣು ಹುಲಿ ‘ಸಿಂಧು’ ಸಾವು

Update: 2025-07-26 22:10 IST

ವಿಜಯನಗರ(ಹೊಸಪೇಟೆ): ಕಮಲಾಪುರದಲ್ಲಿನ ಶ್ರೀಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಮೃಗಾಲಯದಲ್ಲಿನ ‘ಸಿಂಧು’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಶನಿವಾರ ಮೃತಪಟ್ಟಿದೆ.

ಈ ಹುಲಿಗೆ ಅಂದಾಜು 17 ರಿಂದ 18 ವರ್ಷ ವಯಸ್ಸಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಯೋಸಹಜವಾಗಿ ಮೃತಪಟ್ಟಿರುತ್ತದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News