ಕೊಟ್ಟೂರು: ವಿಜಯನಗರ ಪಟ್ಟಣದ ವಿಜಯದಶಮಿ ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಬನ್ನಿಮುಡಿಯುವ ಉತ್ಸವದ ಹಿನ್ನೆಲೆಯಲ್ಲಿ ಹ್ಯಾಳ್ಯಾ ರಸ್ತೆಯಲ್ಲಿರುವ ಬನ್ನಿಮಂಟಪದ ಸುತ್ತಮುತ್ತ ವಿಶೇಷ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ವಿಜಯದಶಮಿ ಪ್ರಯುಕ್ತ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಸ್ವಚ್ಛ ಹಾಗೂ ಸುಸಜ್ಜಿತ ವಾತಾವರಣ ಕಲ್ಪಿಸುವ ಉದ್ದೇಶದಿಂದ ಕೊಟ್ಟೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಎ. ನಸ್ರುಲ್ಲಾ ಅವರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಉತ್ಸವದ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಬನ್ನಿಮಂಟಪದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿಯ ಕಿರಿಯ ಅಭಿಯಂತರರು, ಆರೋಗ್ಯ ನಿರೀಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor