ವಿಜಯನಗರ | ಸೆ.23ರಂದು 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ವಿಜಯನಗರ (ಹೊಸಪೇಟೆ): ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ಸೆಪ್ಟೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ಸಹಯೋಗದಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರೂಪಾಕ್ಷ ತಿಳಿಸಿದ್ದಾರೆ.
ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಝಮೀರ್ ಅಹ್ಮದ್ ಖಾನ್ ಉದ್ಘಾಟಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಸೇವೆಗಳ ಸಚಿವರಾದ ದಿನೇಶ್ ಗುಂಡೂರಾವ್ ಘನ ಉಪಸ್ಥಿತರಿರಲಿದ್ದಾರೆ.
ಸಭೆಗೆ ಹೊಸಪೇಟೆ ಶಾಸಕ ಹೆಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಳ್ಳಾರಿ-ವಿಜಯನಗರ ಸಂಸದ ಈ. ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹಾಗೂ ಹಲವು ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಆಯುಷ್ ಇಲಾಖೆಯ ಆಯುಕ್ತ ವಿಪಿನ್ ಸಿಂಗ್ ಅವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸ್ವಾಗತಿಸಲಿದ್ದಾರೆ.
ಪೂರ್ವಭಾವಿ ಕಾರ್ಯಕ್ರಮಗಳು :
• ಆಯುರ್ವೇದ ನಡಿಗೆ ಜಾಥಾ: ಸೆ.20 ರಂದು ಬೆಳಿಗ್ಗೆ 7.30ಕ್ಕೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯಿಂದ ಆರಂಭವಾಗಿ, ಗಾಂಧಿ ಚೌಕ್, ಬಸ್ ನಿಲ್ದಾಣ, ಪುನೀತ್ ರಾಜಕುಮಾರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಎಲ್‌ಎಫ್‌ಎಸ್ ಸ್ಕೂಲ್, ನಗರಸಭೆ ಕಚೇರಿ ಮಾರ್ಗವಾಗಿ ಮತ್ತೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯವರೆಗೆ ಜಾಥಾ ನಡೆಯಲಿದೆ.
• ಸ್ವಚ್ಛತಾ ಅಭಿಯಾನ: ಸೆ.20 ರಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.
• ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ: ಸೆ.22 ರಂದು ಬೆಳಿಗ್ಗೆ 10 ಗಂಟೆಗೆ ರೋಟರಿ ಕ್ಲಬ್‌ನಲ್ಲಿ ಸಾರ್ವಜನಿಕರಿಗಾಗಿ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರೂಪಾಕ್ಷ ತಿಳಿಸಿದ್ದಾರೆ.