×
Ad

ವಿಜಯನಗರ | ದಲಿತರ ಮೇಲೆ ನಿಂದನೆ ಆರೋಪ : ಪ್ರತಿಭಟನೆ

Update: 2025-10-06 23:37 IST

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ರಾಯಪುರ ಗ್ರಾಮದಲ್ಲಿ ದಲಿತ ಸಮುದಾಯದವರನ್ನು ನಿಂದಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ಎಸ್‌ಸಿ ಸಮಾಜದವರು ನಗರದ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಿಂದ ಕಾಲ್ನಡಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿನ ಮೇಲ್ಜಾತಿಯವರು ಕಳೆದ ಹಲವಾರು ವರ್ಷಗಳಿಂದ ದಲಿತರ ಮೇಲೆ ದರ್ಪದ ವರ್ತನೆ ತೋರಿಸುತ್ತಿದ್ದು, ಹೋಟೆಲ್ ಗಳಲ್ಲಿ ಊಟ ಮಾಡಬಾರದು, ದೇವಾಲಯಗಳಲ್ಲಿ ಪೂಜೆ ಮಾಡಬಾರದು, ಮುಖ್ಯರಸ್ತೆಗಳಲ್ಲಿ ಸಂಚರಿಸಬಾರದು ಎಂಬ ನಿಷೇಧ ಹೇರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಈ ಕುರಿತು ಹಲವು ಬಾರಿ ಪೊಲೀಸ್ ಹಾಗೂ ಆಡಳಿತಾಧಿಕಾರಿಗಳಿಗೆ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ದಲಿತ ವಿದ್ಯಾರ್ಥಿಗಳ ಸಂಘಟನೆಯ ಜಿಲ್ಲಾಧ್ಯಕ್ಷ ಹನುಮೇಶ್, ಎಸ್.ಪರಮೇಶ್, ಮುತ್ತು, ರಾಯಪುರ ಗ್ರಾಮದ ದಲಿತರು ಮತ್ತು ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News