ವಿಜಯನಗರ | ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ವಿಜಯನಗರ(ಹೊಸಪೇಟೆ) : 2025-26ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಮೇ 16 ರಿಂದ ಜೂ.16 ರೊಳಗಾಗಿ ಅನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಜೂ.20 ರಂದು ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣಾಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಜೂ.23 ರಂದು ತಾಲೂಕು ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುವುದು. ಜೂ.30 ರಂದು ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ದಿನಾಂಕ ನಿಗಧಿಪಡಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಿದಲ್ಲಿ bawdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಕರೆ ಮಾಡಿ ಸಂಪರ್ಕಿಸಬೆಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.