ವಿಜಯನಗರ | ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ವಿಜಯನಗರ(ಹೊಸಪೇಟೆ) : 2025-26ನೇ ಸಾಲಿನಲ್ಲಿ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ 5 ರಿಂದ 10ನೇ ತರಗತಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೂಡ್ಲಿಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಜೂ.16 ರೊಳಗೆ https://shp.karnataka.gov.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in/ ನ್ನು ನೋಡಬಹುದು ಮತ್ತು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇಮೇಲ್ ಮೂಲಕ ಅಥವಾ ತಾಲೂಕು ಕೂಡ್ಲಿಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಸಹಾಯವಾಣಿ ಸಂಖ್ಯೆ 08391220583 8050770004 ಮತ್ತು 8050770005 ಗೆ ಸಂಪರ್ಕಿಸಬಹುದು.
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹೊಸಹಳ್ಳಿ, ಚಂದ್ರಶೇಖರಪುರ, ಚಿಕ್ಕಜೋಗಿಹಳ್ಳಿ, ಹಿರೇಹೆಗ್ಡಾಳ್, ಕೊಟ್ಟೂರು, ನಿಂಬಳಗೆರೆ, ಕೂಡ್ಲಿಗಿ, ಗುಡೇಕೋಟೆ. ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಹೊಸಹಳ್ಳಿ, ಉಜ್ಜಿನಿ ಮತ್ತು ಕೂಡ್ಲಿಗಿಯ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿಗಳು ಆರಂಭವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.