×
Ad

ವಿಜಯನಗರ | ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Update: 2025-05-26 22:38 IST

ವಿಜಯನಗರ (ಹೊಸಪೇಟೆ) : 2025-26ನೇ ಸಾಲಿನಲ್ಲಿ ಹೊಸಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯ ಅರ್ಹ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಇಲಾಖಾ ವೆಬ್ ಸೈಟ್ ಮೂಲಕ www.sw.kar.nic.in ನಲ್ಲಿ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಲ್ಲಿಸಿದ ಅರ್ಜಿ ಮತ್ತು ಅಗತ್ಯ ಇರುವ ಎಲ್ಲಾ ದಾಖಲಾತಿಗಳೊಂದಿಗೆ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹೊಸಪೇಟೆ ಕಚೇರಿಗೆ ಅಥವಾ ವಸತಿ ನಿಲಯಗಳಿಗೆ ಸಲ್ಲಿಸಬೇಕು.

ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹೊಸಪೇಟೆ, ಮರಿಯಮ್ಮನಹಳ್ಳಿ, ಕಮಲಾಪುರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಹೊಸಪೇಟೆ, ಕಮಲಾಪುರ ಸೇರಿದಂತೆ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹೊಸಪೇಟೆ 1,2,3,4 ಮತ್ತು ತಾಂತ್ರಿಕ ಬಾಲಕರ ವಿದ್ಯಾರ್ಥಿ ನಿಲಯ ಹೊಸಪೇಟೆ, ಬಾಲಕಿಯರ ವಿದ್ಯಾರ್ಥಿ ನಿಲಯ ಹೊಸಪೇಟೆ, ಹಂಪಿ ಕನ್ನಡ ವಿವಿಯ ಬಾಲಕರ ವಿದ್ಯಾರ್ಥಿ ನಿಲಯ ಈ ಎಲ್ಲಾ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಾತಿಗಳು ಆರಂಭವಾಗಿದೆ.

ಅರ್ಜಿ ಸಲ್ಲಿಸಲು ಆ.31 ರಂದು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 9480843076 ಸಂಖ್ಯೆಗೆ ಕಚೇರಿ ಸಮಯದಲ್ಲಿ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News