×
Ad

ವಿಜಯನಗರ | ಅಲ್ಪಸಂಖ್ಯಾತರ ಮೊರಾರ್ಜಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಅರ್ಜಿ ಆಹ್ವಾನ

Update: 2025-05-12 16:58 IST

ವಿಜಯನಗರ (ಹೊಸಪೇಟೆ) : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಮೌಲನಾ ಆಜಾದ್ ಮಾದರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಬಿಎಸ್ಸಿ, ಬಿಎಡ್, ಮತ್ತು ಎಂಎ, ಬಿಎಡ್, ಎಂಸ್ಸಿ ಮತ್ತು ಬಿ.ಎಡ್ ವಿದ್ಯಾರ್ಹತೆ ಹೊಂದಿರಬೇಕು. ಮೇ.19 ರೊಳಗೆ ಅರ್ಜಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಎಸ್.ಎಮ್.ಎಸ್.ಕೆ ಪ್ಲಾಜಾ, ಗುಗ್ರೀ ನರ್ಸಿಂಗ್ ಹೋಮ್ ಪಕ್ಕದಲ್ಲಿ ಅಂಬೇಡ್ಕರ್ ಸರ್ಕಲ್ ಹತ್ತಿರ ಹೊಸಪೇಟೆ. ಕಚೇರಿ ದೂ.08394-200206, ಸಹಾಯವಾಣಿ ಕೇಂದ್ರ – 8277799990 ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು, ಬಳ್ಳಾರಿ ಮೊ.9611342523, ಹೊಸಪೇಟೆ ತಾಲೂಕು ಮಾಹಿತಿ ಕೇಂದ್ರ ಮೊ.8073250473 ಹರಪನಹಳ್ಳಿ ಮೊ.7676621339 ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News