×
Ad

ವಿಜಯನಗರ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2025-05-26 20:13 IST

ವಿಜಯನಗರ (ಹೊಸಪೇಟೆ) : ಪ್ರಸ್ತುತ 2024-25ನೇ ಸಾಲಿನ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚಿನ ಅಂಕ ಪಡೆದ ವಿಜಯನಗರ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಜಾಲತಾಣದ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿರುತ್ತದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತೀ ವರ್ಷ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ "ಪ್ರತಿಭಾ ಪುರಸ್ಕಾರ" ನೀಡಿ ಸನ್ಮಾನಿಸಲಾಗುತ್ತದೆ. https://ksgeanews.blogspot.com ಗೆ ಮೇ 31ರ ಒಳಗೆ ಕಳಿಸಿಕೊಡಲು ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ವಿಜಯನಗರ ಜಿಲ್ಲಾಧ್ಯಕ್ಷರಾದ ಜಿ.ಮಲ್ಲಿಕಾರ್ಜುನ ಗೌಡರವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ : 8050105541, 9845712066, 9113000676 ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News