×
Ad

ವಿಜಯನಗರ | ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಅಹ್ವಾನ

Update: 2025-05-27 20:23 IST

ವಿಜಯನಗರ(ಹೊಸಪೇಟೆ) : 2025-26 ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಕಾನೂನು ಪದವಿಧರರಿಗೆ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡಪ್ಪ ಜಗಲಿಕೊಪ್ಪ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿರಬೇಕು. ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷದೊಳಗಿರಬೇಕು. ಇತರೆ ಷರತ್ತುಗಳ ಅನ್ವಯ ಭರ್ತಿ ಮಾಡಿದ ಅರ್ಜಿಯನ್ನು ಜೂ.25ರೊಳಗಾಗಿ ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ಹತ್ತಿರ ಇರುವ ಎಸ್‌ಎಮ್‌ಎಸ್‌ಕೆ ಪ್ಲಾಜಾ ಗುಗ್ರೀ ನರ್ಸಿಂಗ್ ಹೋಮ್ ಪಕ್ಕದಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News