×
Ad

ವಿಜಯನಗರ | ತೋಟಗಾರಿಕೆ ರೈತರಿಗೆ ಸಹಾಯಧನಕ್ಕಾಗಿ ಅರ್ಜಿ ಅಹ್ವಾನ

Update: 2025-05-28 21:27 IST

ವಿಜಯನಗರ (ಹೊಸಪೇಟೆ) : 2025-26ನೇ ಸಾಲಿನ ಹೊಸಪೇಟೆ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ), ಮತ್ತು ವಿವಿಧ ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ಅಂಗಾಂಶ ಬಾಳೆ, ದಾಳಿಂಬೆ, ಪಪ್ಪಯಾ, ಡ್ರಾಗನ್ ಹಣ್ಣು ಪ್ರದೇಶ ವಿಸ್ತರಣೆ, ತೋಟಗಾರಿಕೆ ಬೆಳೆಗಳಲ್ಲಿ ಪ್ಲಾಸ್ಟಿಕ್ ಹೊದಿಕೆ, ಕೊಲ್ಡ್ ಸ್ಟೊರೆಜ್, ಮಿನಿ ಟ್ರಾಕ್ಟರ್(20 ಹೆಚ್‌ಪಿ ಒಳಗೆ) ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಶೇ.90 ಸಹಾಯ ಧನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ದಾಳಿಂಬೆ, ಡ್ರಾಗನ್ ಹಣ್ಣು ಪ್ರದೇಶ ವಿಸ್ತರಣೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಹು ವಾರ್ಷಿಕ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ದಾಳಿಂಬೆ, ಸೀಬೆ, ತೆಂಗು, ಅಂಗಾಂಶ ಬಾಳೆ, ಪಪ್ಪಾಯ, ನುಗ್ಗೆ, ಗುಲಾಬಿ) ಈ ಯೋಜನೆಗಳಿಗೆ ಕೂಡಲೇ ತೋಟಗಾರಿಕೆ ಇಲಾಖೆ ಹೊಸಪೇಟೆ ಸಂಪರ್ಕಿಸಿ ಅರ್ಜಿಸಲ್ಲಿಸಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ಹೋಬಳಿಯ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ.ಪಂ.), ಹೊಸಪೇಟೆ, 8310291867, ರೈತ ಸಂಪರ್ಕ ಕೇಂದ್ರ ಹೊಸಪೇಟೆ ಮೊ.9164297220, ಮರಿಯಮ್ಮನಹಳ್ಳಿ ಮೊ.7204888978, ರೈತ ಸಂಪರ್ಕ ಕೇಂದ್ರ ಕಮಲಾಪುರ ಮೊ.8123465548 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News