ವಿಜಯನಗರ| ಸೀತಾರಾಮ ತಾಂಡ ಗ್ರಾಮ ಪಂಚಾಯಿತಿ ಚುನಾವಣೆ: ನೋಡಲ್ ಅಧಿಕಾರಿಗಳನ್ನು ನೇಮಿಸಿದ ಜಿಲ್ಲಾಧಿಕಾರಿ
Update: 2025-12-05 20:02 IST
ವಿಜಯನಗರ: ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿ ಮತ್ತು ತಂಡವನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿಗಳಾದ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
ಹಡಗಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಎಂ.ಡಿ.ಆಲಂ ಬಾಷಾ ಅವರನ್ನು ನೀತಿ ಸಂಹಿತೆ ನೋಡಲ್ ಅಧಿಕಾರಿಯಾಗಿ ಹಾಗೂ ಸೀತಾರಾಮ ತಾಂಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ನಾಯ್ಕ ಮತ್ತು ಕಮಲಾಪುರ ಗ್ರಾಮ ಆಡಳಿತ ಅಧಿಕಾರಿ ಗಂಗಾಧರ ಇವರನ್ನು ಅಧೀನ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.