×
Ad

ವಿಜಯನಗರ | ಬಕ್ರೀದ್ ಹಬ್ಬದ ಹಿನ್ನೆಲೆ : ಮದ್ಯದಂಗಡಿ ಮುಚ್ಚುವಂತೆ ನಿಷೇಧಾಜ್ಞೆ ಜಾರಿ

Update: 2025-06-04 21:24 IST

ಸಾಂದರ್ಭಿಕ ಚಿತ್ರ

ವಿಜಯನಗರ (ಹೊಸಪೇಟೆ) : ಬಕ್ರೀದ್ ಹಬ್ಬದ ನಿಮಿತ್ತ ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ ಉಪವಿಭಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮದ್ಯದಂಗಡಿಗಳನ್ನು ಜೂ.7 ರಂದು ಬೆಳಿಗ್ಗೆ 6 ಗಂಟೆಯಿಂದ ಜೂ.8 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚುವಂತೆ, ಸಾಗಾಣಿಕೆ ಹಾಗೂ ಮದ್ಯ ಮಾರಾಟ ಮಾಡದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಮತ್ತು ಈ ಹಬ್ಬದ ದಿನಗಳಲ್ಲಿ ರಾತ್ರಿ ವೇಳೆಯಲ್ಲಿ ಹೆಚ್ಚಿನ ಜನ ಸೇರುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರು ಮದ್ಯ ಸೇವನೆ ಮಾಡುವುದು, ಕುಡಿದು ಅಮಲಿನಲ್ಲಿ ವಾಹನ ಚಾಲನೆ ಮಾಡುವುದರಿಂದ ಗಲಾಟೆಗಳು ಮತ್ತು ಅಪಘಾತಗಳು ಆಗುವ ಸಾಧ್ಯತೆಗಳು ಇರುವ ಕಾರಣ ಹಗರಿಬೊಮ್ಮನಹಳ್ಳಿ, ಮರಿಯಮ್ಮನಹಳ್ಳಿ, ತಂಬ್ರಹಳ್ಳಿ, ಕೂಡ್ಲಿಗಿ, ಹೊಸಹಳ್ಳಿ, ಕೊಟ್ಟೂರು, ಗುಡೇಕೋಟೆ, ಇಟ್ಟಿಗಿ, ಹಡಗಲಿ, ಹರಪನಹಳ್ಳಿ, ಚಿಗಟೇರಿ, ಹಲವಾಗಲು ಮತ್ತು ಅರಸೀಕೆರೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡದಂತೆ ಹಾಗೂ ಮದ್ಯದಂಗಡಿಗಳನ್ನು ಮುಚ್ಚುವಂತೆ ನಿಷೇದಾಜ್ಞೆ ಜಾರಿಗೊಳಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News