×
Ad

ವಿಜಯನಗರ | ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಸೆ.14 ರಂದು ಹಂಪಿಯಿಂದ ಬೆಂಗಳೂರಿಗೆ ಬೈಕ್ ರ‍್ಯಾಲಿ ಜಾಥಾ ಕಾರ್ಯಕ್ರಮ

Update: 2025-09-13 21:21 IST

ವಿಜಯನಗರ(ಹೊಸಪೇಟೆ), ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ನಿಮಿತ್ತ ಸೆ.14 ರಂದು ಬೆ.7 ಗಂಟೆಗೆ, ವಿಶ್ವ ಪರಂಪರೆ ತಾಣವಾದ ಹಂಪಿಯ ವಿಜಯ ವಿಠಲ ದೇವಸ್ಥಾನದಿಂದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಬೈಕ್ ರ‍್ಯಾಲಿಗೆ ಚಾಲನೆ ನೀಡಲಿದ್ದಾರೆ.

ಹಂಪಿಯ ವಿಜಯ ವಿಠಲ ದೇವಸ್ಥಾನದಿಂದ ಆರಂಭಗೊಂಡು ಕಮಲಾಪುರ, ಹಂಪಿಯ ಶ್ರೀವಿರೂಪಾಕ್ಷೇಶ್ವರ ದೇವಸ್ಥಾನ, ಕಡ್ಡಿರಾಂಪುರ, ಮಲಪನಗುಡಿ, ಕನಕದಾಸವೃತ್ತ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ವೃತ್ತ, ಅಂಬೇಡ್ಕರ್ ವೃತ್ತ, ವಿಎನ್‌ಸಿ ಕಾಲೇಜು, ಸಾಯಿಬಾಬಾ ಸರ್ಕಲ್, ಗುರು ಪಿಯು ಕಾಲೇಜು, ರಾಷ್ಟ್ರೀಯ ಹೆದ್ದಾರಿ ಮೂಲಕ ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಬೆಂಗಳೂರು ವಿಧಾನಸೌಧ ತಲುಪಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News