×
Ad

ವಿಜಯನಗರ | ಡಿವೈಡರ್‌ಗೆ ಬಸ್‌ ಢಿಕ್ಕಿ : ಇಬ್ಬರು ಮೃತ್ಯು, 8 ಮಂದಿಗೆ ಗಾಯ

Update: 2025-09-16 12:54 IST

ಸಾಂದರ್ಭಿಕ ಚಿತ್ರ

ವಿಜಯನಗರ :ಲಾರಿ ಓವರ್‌ಟೇಕ್‌ ಮಾಡಲು ಹೋಗಿ ಖಾಸಗಿ ಬಸ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಿಸ್ಟಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 8 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮುದ್ಗಲ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ಲಾರಿಯೊಂದನ್ನು ಓವರ್‌ಟೇಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​​ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ದೊಡ್ಮನಿ, ಕೊಟ್ಟೂರು ಸಿಪಿಐ ದುರುಗಪ್ಪ, ಮತ್ತು ಜಿಲ್ಲಾ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಡಿವೈಎಸ್‌ಪಿ ಮಲ್ಲೇಶ್ ದೊಡ್ಮನಿ ಅವರು, ತನಿಖೆಯಲ್ಲಿ ಚಾಲಕನ ನಿರ್ಲಕ್ಷ್ಯ ಸ್ಪಷ್ಟವಾಗಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ NH 50ರ ಬಿಸ್ಟಹಳ್ಳಿ ಬಳಿಯ ರಸ್ತೆ ತುರ್ತು ಸಂಪರ್ಕ ಮಾರ್ಗವಾಗಿದ್ದು, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಅಪಘಾತಗಳ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸುರಕ್ಷತಾ ಕ್ರಮಗಳ ಅಗತ್ಯವಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News