×
Ad

ವಿಜಯನಗರ | ನ.8ರಂದು ಭಕ್ತಶ್ರೇಷ್ಠ ಕನಕದಾಸರ ಜಯಂತಿ ಸರಳವಾಗಿ ಆಚರಣೆ : ಡಿಸಿ ಕವಿತಾ ಎಸ್.ಮನ್ನಿಕೇರಿ

Update: 2025-10-27 22:30 IST

ವಿಜಯನಗರ (ಹೊಸಪೇಟೆ): ಭಕ್ತಶ್ರೇಷ್ಠ ಕನಕದಾಸರ ಜಯಂತಿಯನ್ನು ನ.8ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ನಗರಸಭೆ ಸಹಯೋಗದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿರುವ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಜಯಂತಿಯ ಸಂದರ್ಭದಲ್ಲಿ ಕನಕದಾಸ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಹಾಗೂ ಗಾಂಧೀಜಿ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಅವರು ಸೂಚಿಸಿದರು. ಜೊತೆಗೆ ಕನಕದಾಸರ ಕುರಿತ ವಿಶೇಷ ಉಪನ್ಯಾಸಕ್ಕಾಗಿ ಉತ್ತಮ ವಾಗ್ಮಿಗಳನ್ನು ಆಹ್ವಾನಿಸುವುದಾಗಿ ತಿಳಿಸಿದರು.

ಕುರುಬ ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಸಮುದಾಯದ ಮುಖಂಡರು ಅಯ್ಯಾಳಿ ತಿಮ್ಮಪ್ಪ ಮತ್ತು ಗಾದಿಗನೂರು ಹಾಲಪ್ಪ ಮಾತನಾಡಿ, ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಹಾಗೂ ತಾಷಾರಾಂ ಡೋಲು ಕಲಾತಂಡಗಳಿಗೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಕ್ರಮ್ ಅಲಿ ಷಾ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಮಂಜುನಾಥ್ ಸೇರಿದಂತೆ ಹಲವು ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News