ವಿಜಯನಗರ | ಅನಧಿಕೃತ ಪಂಪ್ಸೆಟ್ ತೆರವು, ವಿದ್ಯುತ್ ಸಂಪರ್ಕ ಕಡಿತಕ್ಕೆ ಜಿಲ್ಲಾಧಿಕಾರಿ ಸೂಚನೆ
ವಿಜಯನಗರ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಮುಖ ಪೈಪ್ಲೈನ್ಗಳಿಗೆ ಸಾರ್ವಜನಿಕರು ಅನಧಿಕೃತವಾಗಿ ಅಳವಡಿಸಿರುವ ಪಂಪ್ಸೆಟ್ ಮೋಟಾರ್ಗಳನ್ನು ತೆರವುಗೊಳಿಸಿ, ಅವುಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಸೂಚಿಸಿದ್ದಾರೆ.
ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ಮತ್ತು ಹಡಗಲಿ ತಾಲೂಕು ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲು ನಿರ್ದೇಶಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ತೀವ್ರ ಬರ ಆವರಿಸಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.
ಇಂತಹ ಸಂಕಷ್ಟದ ಸಮಯದಲ್ಲಿ ಪೈಪ್ಲೈನ್ಗಳಿಗೆ ಅನಧಿಕೃತ ಸಂಪರ್ಕ ಪಡೆದರೆ ಯೋಜನೆಯಡಿ ಬರುವ ಎಲ್ಲಾ ಗ್ರಾಮಗಳಿಗೆ ಸಮಾನವಾಗಿ ನೀರು ಪೂರೈಸಲು ಅಡ್ಡಿಯಾಗಲಿದೆ. ಇದರಿಂದ ಈಗಾಗಲೇ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರಿಗೆ ಮತ್ತಷ್ಟು ತೊಂದರೆಯಾಗಲಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣವೇ ಕಾರ್ಯಪ್ರವೃತ್ತರಾಗಿ ಅನಧಿಕೃತ ಪಂಪ್ಸೆಟ್ಗಳನ್ನು ತೆರವುಗೊಳಿಸುವಂತೆ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಿಲ್ಲಾಧಿಕಾರಿ ಕಾವಿತಾ ಎಸ್, ಮನ್ನಿಕೇರಿ ಸೂಚಿಸಿದ್ದಾರೆ.