×
Ad

ವಿಜಯನಗರ | ಅಡುಗೆ ಸಿಲಿಂಡರ್ ಸ್ಫೋಟ ಪ್ರಕರಣ : ಸ್ಥಳಕ್ಕೆ ಸಚಿವ ಝಮೀರ್ ಅಹ್ಮದ್ ಭೇಟಿ

Update: 2025-09-27 22:04 IST

ವಿಜಯನಗರ (ಹೊಸಪೇಟೆ): ತಾಲ್ಲೂಕಿನ ಗಾದಿಗನೂರು ಗ್ರಾಮದಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿ ಒಂದೇ ಕುಟುಂಬದ 8 ಜನರು ಗಾಯಗೊಂಡು ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆ ಸ್ಥಳಕ್ಕೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಝಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಇಂತಹ ದುರ್ಘಟನೆ ಸಂಭವಿಸಬಾರದು. ವಿಶೇಷವಾಗಿ, ಜಗತ್ತಿನ ಬೆಳಕನ್ನು ನೋಡದ ಎರಡು ವರ್ಷದ ಮಗುವಿಗೆ 70% ಶರೀರದ ಭಾಗಕ್ಕೆ ಸುಟ್ಟ ಗಾಯಗಳಾಗಿವೆ, ಇದು ಅತ್ಯಂತ ದುಃಖಕರವಾಗಿದೆ. ಎಲ್ಲಾ ಗಾಯಾಳುಗಳಿಗೆ ತಕ್ಷಣ ಮತ್ತು ಸೂಕ್ತ ಆರೋಗ್ಯ ಚಿಕಿತ್ಸೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಅಪೋಲೊದಿಂದ ಪ್ಲಾಸ್ಟಿಕ್ ಸರ್ಜನ್ ವೈದ್ಯರು ಸ್ಥಳಕ್ಕೆ ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಪರಿಶೀಲನೆಯ ನಂತರ, ಅವರ ಉತ್ತಮ ಚಿಕಿತ್ಸೆ ಬೆಂಗಳೂರು ಅಥವಾ ಸ್ಥಳದಲ್ಲಿಯೇ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News