ವಿಜಯನಗರ | ಹಂಪಿ ಉತ್ಸವದ ಲೋಗೋ ರಚಿಸಿ, ಬಹುಮಾನ ಗೆಲ್ಲಿ : ಡಿಸಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ 2026ರ ಹಂಪಿ ಉತ್ಸವಕ್ಕೆ ನೂತನ ಲೋಗೋ ರಚಿಸುವ ಕಲಾವಿದರಿಗೆ ಜಿಲ್ಲಾಡಳಿತದಿಂದ ಸೂಕ್ತ ಬಹುಮಾನ ನೀಡಲಾಗುವುದು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿ ಅವರ ಸಮ್ಮತಿ ಪಡೆದು 2025–26ನೇ ಸಾಲಿನ ಹಂಪಿ ಉತ್ಸವವನ್ನು ಫೆ.13, 14 ಮತ್ತು 15, 2026 ರಂದು ಅದ್ದೂರಿಯಾಗಿ ಆಚರಿಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ಸವಕ್ಕೆ ಹೊಸ ಲೋಗೋ ವಿನ್ಯಾಸಗೊಳಿಸುವುದು ಅಗತ್ಯವಾಗಿದ್ದು, ಆಸಕ್ತ ಕಲಾವಿದರಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಲೋಗೋ ವಿನ್ಯಾಸ ಮಾಡಲು ಆಸಕ್ತ ಕಲಾವಿದರು ತಮ್ಮ ಪ್ರಸ್ತಾವನೆಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾ ಕಚೇರಿಗೆ ಜ.8ರೊಳಗೆ ಸಲ್ಲಿಸಬೇಕು. ನಿಗದಿತ ಅವಧಿ ನಂತರ ಬಂದ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.