×
Ad

ವಿಜಯನಗರ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶಾತಿ ಆರಂಭ

Update: 2025-05-09 19:54 IST

ಸಾಂದರ್ಭಿಕ ಚಿತ್ರ

ವಿಜಯನಗರ(ಹೊಸಪೇಟೆ) : 2025-26 ನೇ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶಾತಿಗಳು ಆರಂಭವಾಗಿವೆ ಎಂದು ಹೂವಿನಹಡಗಲಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಎಸೆಸೆಲ್ಸಿ, ಪಿಯುಸಿ ಸೈನ್ಸ್, ಐಟಿಐ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನೀಯರಿಂಗ್, ಸೈಬರ್ ಫಿಜಿಕಲ್ ಸಿಸ್ಟಮ್ ಮತ್ತು ಸೆಕ್ಯೂರಿಟಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನೀಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನೀಯರಿಂಗ್ ವಿಭಾಗಗಳು ಲಭ್ಯವಿದೆ. ಕಾಲೇಜಿನಲ್ಲಿ ನುರಿತ ಬೋಧಕ ಸಿಬ್ಬಂದಿಗಳು ಉತ್ತಮ ಗುಣಮಟ್ಟದ ಪ್ರಯೋಗಾಲಯ, ಗ್ರಂಥಾಲಯ ಸೇರಿದಂತೆ ಕ್ಯಾಂಪಸ್ ಇಂಟರ್‌ವ್ಯೂ ಸೌಲಭ್ಯ ಹೊಂದಿದೆ. ಆಸಕ್ತ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ಪ್ರವೇಶಾತಿ ಅರ್ಜಿಗಳನ್ನು ಭರ್ತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹೂವಿನಹಡಗಲಿ. ಮೊ. 9448721423, 8147316279, 9591219575, 9113273556 ಸಂಖ್ಯೆಗಳಿಗೆ ಕರೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News