×
Ad

ವಿಜಯನಗರ | ಸೆ.13 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

Update: 2025-09-11 21:01 IST

ವಿಜಯನಗರ(ಹೊಸಪೇಟೆ) : 2025-26 ನೇ ಸಾಲಿನ ವಿಜಯನಗರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.13 ರಂದು ಬೆ.10:30ಕ್ಕೆ ನಗರದ ಜಿಲ್ಲಾ ಕ್ರೀಡಾಗಂಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳು : ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಟಾಲ್ (ಪುರುಷರಿಗೆ ಮಾತ್ರ), ಮತ್ತು ಥ್ರೋಬಾಲ್, ಬಾಲ್ ಬ್ಯಾಡ್ಮಿಂಟ್, ಬ್ಯಾಡ್ಮಿಂಟನ್, ಬ್ಯಾಸ್ಕೆಟ್‌ಬಾಲ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಯೋಗ. ನೇರ ಆಯ್ಕೆ : ಟೆನ್ನಿಸ್, ನೆಟ್‌ಬಾಲ್ ಮತ್ತು ಈಜು ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿಎಂ ಜಾಕೀರ್ ಮೊ.9036335986, ಮಹ್ಮದ್ ಮಸೂದ್ ಮೊ.9886688858 ಮತ್ತು ಕಚೇರಿ ಸಿಬ್ಬಂದಿ ರತಿಕಾಂತ್ ಮೊ.8971238689, ರಮೇಶ 9108089639, ಶಿವು 8073727985 ಮತ್ತು ಜಗದೀಶ್ 9483480101 ಈ ಸಂಖ್ಯೆಗಳಿಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News