×
Ad

ವಿಜಯನಗರ | ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ಝಮೀರ್ ಅಹ್ಮದ್ ಧ್ವಜಾರೋಹಣ

Update: 2024-11-01 12:07 IST

ವಿಜಯನಗರ: 69ನೇ ಕರ್ನಾಟಕ ರಾಜ್ಯೋತ್ಸವವನ್ನು ಜಿಲ್ಲಾಡಳಿತ ನೇತೃತ್ವದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಲ್ಲಿ ಆಚರಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಕನ್ನಡದ ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೇ ವೇಳೆ ಜಿಲ್ಲೆಯ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಸಚಿವರು, ಸಿದ್ದರಾಮಯ್ಯ ನೇತೃತ್ವದಲ್ಲಿ ನಮ್ಮ ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿಗಳು ನಿರಂತರ ಚಾಲ್ತಿಯಲ್ಲಿ ಇರುತ್ತದೆ ಎಂದು ಸ್ಪಷ್ಟಪಡಿಸಿದರು

ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಸಹಾಯಕ ಪೊಲೀಸ್ ಅಧೀಕ್ಷಕ ಸಲೀಂ ಪಾಷಾ, ಸಹಾಯಕ ಆಯುಕ್ತ ಹೊಸಪೇಟೆ ವಿವೇಕಾನಂದ ಪಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ಶಂಕರ್ ನಾಯಕ್, ತಾಲೂಕು ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ಬಸವರಾಜ್, ತಾಲೂಕು ದಂಡಾಧಿಕಾರಿ ಶೃತಿ ಎಂ, ಎಚ್.ಎನ್,ಮುಹಮ್ಮದ್ ಇಮಾಮ ನಿಯಝಿ ಮತ್ತಿತರರು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News