ವಿಜಯನಗರ | ಜೂ.27 ರಂದು ಸರಕಾರದ ಯೋಜನೆಗಳು, ಸಾಧನೆಗಳ ಬಿಂಬಿಸುವ ವಸ್ತು ಪ್ರದರ್ಶನ
Update: 2025-06-26 22:26 IST
ವಿಜಯನಗರ (ಹೊಸಪೇಟೆ) : ಹೊಸಪೇಟೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜೂ.27 ರಿಂದ 30 ರವರೆಗೆ ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯಪ್ಪ ಬಿ. ತಿಳಿಸಿದ್ದಾರೆ.
ವಸ್ತು ಪ್ರದರ್ಶನವನ್ನು ಹೊಸಪೇಟೆ ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಆಗಮಿಸಲಿದ್ದಾರೆ. ವಸ್ತು ಪ್ರದರ್ಶನದಲ್ಲಿ 4 ಸೆಲ್ಪಿ ಪಾಯಿಂಟ್‌ಗಳು, ನಾಮಫಲಕಗಳು, ರೋಟ್ಯಾಟಿಂಗ್ ಯೂನಿಟ್ ಸೇರಿ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.