×
Ad

ವಿಜಯನಗರ | ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಸಿವಿಲ್‌ ಗುತ್ತಿಗೆದಾರ ಆತ್ಮಹತ್ಯೆ

Update: 2025-10-27 19:04 IST

 ಆನಂದ ಉಮೇಶ್‌ ಹೆಗಡೆ

ವಿಜಯನಗರ (ಹೂವಿನಹಡಗಲಿ) : ಹೂವಿನಹಡಗಲಿಯ ಖಾಸಗಿ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಸಿವಿಲ್‌ ಗುತ್ತಿಗೆದಾರ ಆನಂದ ಉಮೇಶ್‌ ಹೆಗಡೆ (40) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಆನಂದ ಹೆಗಡೆ ಅವರು ಹೂವಿನಹಡಗಲಿ ತಾಲ್ಲೂಕು ಕ್ರೀಡಾಂಗಣದ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿ ಟೆಂಡರ್ ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಭಾನುವಾರ ಸಂಜೆ ಹುಬ್ಬಳ್ಳಿಯಿಂದ ಹೂವಿನಹಡಗಲಿಗೆ ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ತಂಗಿದ್ದರೆಂದು ಎಂನ್ನಲಾಗಿದೆ.

ಆದರೆ, ಸೋಮವಾರ ಬೆಳಗ್ಗೆಯಾದರೂ ಕುಟುಂಬಸ್ಥರ ಕರೆ ಸ್ವೀಕರಿಸದ ಕಾರಣ ಅನುಮಾನಗೊಂಡ ಕುಟುಂಬಸ್ಥರು ಲಾಡ್ಜ್‌ಗೆ ಕರೆಮಾಡಿದಾಗ ಬಾಗಿಲು ತೆರೆಯದೆ ಇದ್ದುದರಿಂದ ಪೊಲೀಸರಿಗೆ ಕರೆ ಮಾಡಿ ಲಾಡ್ಜ್ ಸಿಬ್ಬಂದಿ ಬಾಗಿಲು ಓಪನ್ ಮಾಡಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಯ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News