×
Ad

ವಿಜಯನಗರ | ಅಕ್ರಮ ಪಡಿತರ ಅಕ್ಕಿ ಸಾಗಾಟ : 193 ಕ್ವಿಂಟಾಲ್ ಆಹಾರಧಾನ್ಯ ವಶ

Update: 2025-05-07 13:08 IST

ವಿಜಯನಗರ(ಹೊಸಪೇಟೆ) : ಹೊಸಪೇಟೆ ತಾಲ್ಲೂಕಿನಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ವಿತರಿಸುವ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವುದನ್ನು ಮೇ 6 ರಂದು ಪತ್ತೆಮಾಡಿ, 182.6 ಕ್ವಿಂಟಾಲ್ ಅಕ್ಕಿ ಮತ್ತು 10.50 ಕ್ವಿಂಟಾಲ್ ರಾಗಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ರಿಯಾಝ್‌ ತಿಳಿಸಿದ್ದಾರೆ.

6,05,660 ರೂ. ಮೌಲ್ಯದ ಆಹಾರ ಧಾನ್ಯ, 1 ವಾಹನ ಸೇರಿ ಮೂರು ಗೋದಾಮುಗಳನ್ನು ಸೀಝ್‌ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಿ, ಇವರ ಮೇಲೆ ಅಗತ್ಯ ವಸ್ತುಗಳ ಕಾಯ್ದೆಯಡಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News