×
Ad

ವಿಜಯನಗರ | ಪರಿಸರ ಸ್ನೇಹಿ ಬಣ್ಣ ರಹಿತ ಮಣ್ಣಿನ ಗಣೇಶ ಪ್ರತಿಷ್ಠಾಪಿಸಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

Update: 2025-08-14 18:28 IST

ವಿಜಯನಗರ(ಹೊಸಪೇಟೆ), ಆ.13 : ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಒ.ಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸದೇ ಮಣ್ಣಿನ ಬಣ್ಣ ರಹಿತ ಗಣೇಶನನ್ನು ಪ್ರತಿಷ್ಠಾಪಿಸುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸೂಚಿಸಿದ್ದಾರೆ.

ಗಣೇಶ ಹಬ್ಬದಲ್ಲಿ ಜಿಲ್ಲಾದ್ಯಾಂತ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ಅವುಗಳನ್ನು ಪೂಜಿಸಿ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಇದರಿಂದ ನೈಸರ್ಗಿಕ ಜಲಮೂಲಗಳು ಮಲೀನಗೊಳ್ಳುತ್ತಿವೆ. ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು ಎಂದು ಅವರು ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News