×
Ad

ವಿಜಯನಗರ | ಜಿಲ್ಲಾಡಳಿತದಿಂದ ಜನಸ್ಪಂದನ ಕಾರ್ಯಕ್ರಮ

Update: 2025-05-03 22:21 IST

ವಿಜಯನಗರ(ಹೊಸಪೇಟೆ) : ಜನತಾದರ್ಶನ ಮೂಲಕ ಕೇವಲ ಸಾರ್ವಜನಿಕರ ಅಹವಾಲು ಕೇಳುವುದು ಮಾತ್ರವಲ್ಲದೇ ಆದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಕ್ರಮವನ್ನು ಕೈಗೊಂಡು ನಾಗರೀಕರಿಗೆ ಭರವಸೆ ಮೂಡಿಸಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಝಮೀರ್ ಅಹ್ಮದ್‌ಖಾನ್ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಅವರಣದಲ್ಲಿ ಜಿಲ್ಲಾಡಳಿತ, ಜಿಪಂ ನಿಂದ ಏರ್ಪಡಿಸಿದ್ದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಜನಸ್ಪಂದನ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್ ಬಳಿ ಅರ್ಜಿ ಸಲ್ಲಿಸಿದರೆ, ಇನ್ನೂ ಕೆಲವರು ನೇರವಾಗಿ ಉಸ್ತುವಾರಿ ಸಚಿವರನ್ನು, ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದರು. ಸ್ವತಃ ಸಚಿವರೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸಹ ಸ್ಥಳದಲ್ಲೇ ಇದ್ದು ಇದರ ಬಗ್ಗೆ ಮಾಹಿತಿ ಪಡೆದುಕೊಂಡರು.

ವಿವಿಧ ಇಲಾಖೆಯ ಕೌಂಟರ್ ಸ್ಥಾಪನೆ :

ಸಾರ್ವಜನಿಕರಿಂದ ಅಹವಾಲು ಸಲ್ಲಿಕೆಗೆ ಜಿಲ್ಲಾಡಳಿತದಿಂದ ಕೌಂಟರ್ ಸ್ಥಾಪಿಸಲಾಗಿತ್ತು, ಇಲಾಖಾವಾರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಸಾರ್ವಜನಿಕರಿಂದ ಅರ್ಜಿ ಮತ್ತು ಅಹವಾಲುಗಳನ್ನು ಸ್ವೀಕರಿಸಿ ಕಂಪ್ಯೂಟರ್‌ನಲ್ಲಿ ನಮೂದಿಸಿ ಸ್ವೀಕೃತಿಯನ್ನು ಅರ್ಜಿದಾರರಿಗೆ ನೀಡಲಾಯಿತು.

ಜನ ಸ್ಪಂದನಾದಲ್ಲಿ ಸಾರ್ವಜನಿಕರು ಆಯಾ ಇಲಾಖೆಯ ಕೌಂಟರ್‌ಗಳ ಬಳಿ ತೆರಳಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 13 ಹಾಗೂ ನಗರಸಭೆಗೆ 37, ಆರ್‌ಡಿಪಿಆರ್ 16, ಇತರೆ ವಿವಿಧ ಇಲಾಖೆಗಳ ಅರ್ಜಿಗಳು 18 ಸೇರಿದಂತೆ ಒಟ್ಟು 84 ಅರ್ಜಿಗಳನ್ನು ಸ್ವೀಕರಿಸಲಾಯಿತು. 2 ಅರ್ಜಿಗಳನ್ನು ಸ್ಥಳದಲ್ಲೆ ಇತ್ಯರ್ಥಪಡಿಸಲಾಯಿತು.

ಈ ವೇಳೆ ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ, ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಉಪ ಅರಣ್ಯ ಸಂರಕ್ಷಣಾಧಿಕಾರಿ ವೇದಿಕೆಯಲ್ಲಿದ್ದರು. ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರಾದ ಹೆಚ್.ಕಾಳಪ್ಪ, ಬಸವಲಿಂಗಪ್ಪ ಮೇಟಿ, ಹಾಗು ಹೆಚ್.ಗವಿಯಣ್ಣ, ಜಿ.ಸಿದ್ದಮ್ಮ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಹೊಸಪೇಟೆ ಸಹಾಯಕ ಆಯುಕ್ತ ವಿವೇಕಾನಂದ, ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News