×
Ad

ವಿಜಯನಗರ| ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ

Update: 2025-12-23 19:16 IST

ವಿಜಯನಗರ: ನಗರದ ಗಾಂಧಿಚೌಕ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚೌದ್ರಿಚರಣ್ ಸಿಂಗ್ ಅವರು ಹುಟ್ಟಿದ ದಿನದ ಹಿನ್ನಲೆ ರೈತರ ದಿನಾಚರಣೆ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಟಿ.ನಾಗರಾಜ್, ಯಾವುದೇ ಸರಕಾರ ಬಂದಲ್ಲಿ ರೈತರಿಗೆ ಅನಾನುಕೂಲಗಳೇ ಹೆಚ್ಚು. ರೈತರ ಪರವಾಗಿ ನಿಷ್ಠೆಯಿಂದ ಕೆಲಸ ಮಾಡುವುದು ಬಹಳಷ್ಟು ಕಡಿಮೆ. ಆದ್ದರಿಂದ ಮುಂದಿನ 2028ರ ಚುನಾವಣೆಯಲ್ಲಿ ರೈತರೇ ಅಧಿಕಾರಕ್ಕೆ ಬಂದಲ್ಲಿ ರೈತರಿಗೆ ಆಗುವ ತೊಂದರೆಗಳನ್ನು ತಪ್ಪಿಸಬಹುದು ಮತ್ತು ಸ್ಥಳಿಯ ಸಕ್ಕರೆ ಕಾರ್ಖಾನೆಯು 8-9 ವರ್ಷಗಳಿಂದ ಮುಚ್ಚಿದ್ದು, ಶಾಸಕರಿಗೂ, ಸಚಿವರಿಗೂ ಮತ್ತು ಮುಖ್ಯಮಂತ್ರಿಯವರಿಗೂ ಬಹಳಷ್ಟು ಬಾರಿ ಮನವಿ ಪತ್ರ ಸಲ್ಲಿಸಿದರು ಸಹ ಇಲ್ಲಿಯವರೆಗೂ ಯಾವುದೇ ಪ್ರಯೋಜನೆ ಆಗಿರುವುದಿಲ್ಲ ಎಂದು ಹೇಳಿದರು. 

ತಾಲೂಕು ಅಧ್ಯಕ್ಷರಾದ ಸಣ್ಣಕ್ಕಿ ರುದ್ರಪ್ಪ ಮಾತನಾಡಿ, ಚೌದ್ರಿ ಚರಣ್ ಸಿಂಗ್ 5ನೇ ಪ್ರಧಾನ ಮಂತ್ರಿಯಾಗಿ ರೈತರ ಪರವಾಗಿ ಅನೇಕ ರೀತಿಯ ಸೌಕರ್ಯಗಳನ್ನು ಕಲ್ಪಿಸಿದ್ದರು. ಕೃಷಿಯಲ್ಲಿ ಬದಲಾವಣೆ ತರುವಲ್ಲಿ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಕೃಷಿಜಮೀನ್‌ದಾರ್ ಪದ್ದತಿ ಮತ್ತು ಜೀತದಾಳು ಪದ್ದತಿಯನ್ನು ಹೋಗಲಾಡಿಸುವುದರಲ್ಲಿ ಯಶಸ್ಸನ್ನು ಕಂಡವರು ಎಂದು ಹೇಳಿದರು.

ಜಿಲ್ಲಾ ಕಾರ್ಯಧ್ಯಕ್ಷರಾದ ಎಂ.ಜಡಿಯಪ್ಪ ಮಾತನಾಡಿ, ತಾಲೂಕು ಪಂಚಾಯಿತಿಗೆ ಬರುವಂತಹ ರೈತರಿಗೆ ಸರ್ಕಾರಿ ಸೌಲಭ್ಯಗಳ ಯಾವುದೇ ಮಾಹಿತಿ ಇರುವುದಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಪಿಡಿಓಗಳು ರೈತರಿಗೆ ಮಾಹಿತಿ ನೀಡಬೇಕು ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಬರುವಂತಹ ಸರಕಾರದ ಸೌಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.  

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಖಾಜಾ ನಿಯಾಜ್, ಜಹಿರುದ್ದೀನ್, ಪದಾಧಿಕಾರಿಗಳಾದ ಟಿ.ನಾಗರಾಜ, ಸಣ್ಣಕ್ಕಿ ರುದ್ರಪ್ಪ, ಎಂ.ಜಡಿಯಪ್ಪ, ಆರ್.ಆರ್.ತಾಯಪ್ಪ, ವಿ.ಗಾಳೆಪ್ಪ, ಅಂಕ್ಲೇಶ್, ಬಸವರಾಜ, ಸುರೇಶ, ವೀರೇಶ್, ರಾಮಾಂಜಿನಿ, ಪಿ.ಕೆ.ಹಳ್ಳಿ ರಾಜಶೇಖರ, ಭುವನಹಳ್ಳಿ ಗೋವಿಂದಪ್ಪ, ಮತ್ತು ಅಧಿಕಾರಿಗಳಾದ ದಯಾನಂದ ಎ.ಇ.ಇ, ಕೃಷಿ ಸಹಾಯಕ ನಿರ್ದೇಶಕರು ಮನೋಹರ್ ಗೌಡ, ತೋಟಗಾರಿಕೆ ಸಹಾಯಕ ನಿರ್ದೇಶಕ ರಮೇಶ್, ತಾಲೂಕು ಪಂಚಾಯಿತಿ ಇ.ಓ ಮತ್ತು ರೈತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News