×
Ad

ವಿಜಯನಗರ | ಕಾಯಕ ನಿಷ್ಠೆಯ ಅರಿವು ಮೂಡಿಸಿದವರು ಕಾಯಕಯೋಗಿ ಶಿವಶರಣ ನುಲಿ ಚಂದಯ್ಯ : ಸಿದ್ದಲಿಂಗೇಶ್ ರಂಗಣ್ಣನವರ್

Update: 2025-08-09 19:50 IST

ವಿಜಯನಗರ(ಹೊಸಪೇಟೆ) : ಕಾಯಕ ಮತ್ತು ದಾಸೋಹದ ಮಹತ್ವವನ್ನು ವಚನಗಳ ಮೂಲಕ ಅರಿವು ಮೂಡಿಸಿದ ಕಾಯಕಯೋಗಿ ಶಿವಶರಣ ನುಲಿ ಚಂದಯ್ಯ ಸ್ಮರಣೀಯರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಾಯಕಯೋಗಿ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ನುಲಿಯ ಚಂದಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶನಿವಾರ ಉದ್ಘಾಟಿಸಲಾಯಿತು.

ಈ ವೇಳೆ ಸಮುದಾಯದ ಮುಖಂಡರು, ಜಿಲ್ಲಾಧಿಕಾರಿಗಳ ಸಿಬ್ಬಂದಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News