ವಿಜಯನಗರ| ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆ ಸಾವು
Update: 2026-01-20 19:17 IST
ಮರಿಯಮ್ಮನಹಳ್ಳಿ,ಜ. 20: ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ ಘಟನೆ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರ ಚಿಲಕನಹಟ್ಟಿ ಹತ್ತಿರ ಸೋಮವಾರ ರಾತ್ರಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಳೆ ಚಿರತೆ ರಸ್ತೆ ದಾಟಲು ಮುಂದಾದಾಗ ವೇಗವಾಗಿ ಬಂದ ವಾಹನ ಢಿಕ್ಕಿ ಹೊಡೆದಿದೆ. ಇದರಿಂದ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ.
ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.