×
Ad

ವಿಜಯನಗರ | ಮಧ್ಯಪ್ರಾಚ್ಯ ಉದ್ವಿಗ್ನ : ಸಹಾಯವಾಣಿ ಸಂಪರ್ಕಿಸಲು ಜಿಲ್ಲಾಧಿಕಾರಿ ಮನವಿ

Update: 2026-03-02 18:28 IST

ವಿಜಯನಗರ(ಹೊಸಪೇಟೆ) : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾದ ಅಸ್ಥಿರ ಪರಿಸ್ಥಿತಿಯಿಂದ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲಾಡಳಿತ ಮಹತ್ವದ ಮಾಹಿತಿಯನ್ನು ಪ್ರಕಟಿಸಿದೆ.

ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಇದರಿಂದ ದುಬೈ ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನೇಕ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.

ಜಿಲ್ಲಾಡಳಿತದ ಕ್ರಮಗಳು :

ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ತುರ್ತು ಕಾರ್ಯಾಚರಣೆ ಕೇಂದ್ರಗಳು 24x7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಭಾರತೀಯ ರಾಯಭಾರ ಕಚೇರಿಗಳ ಸೂಚನೆಗಳನ್ನು ಜಿಲ್ಲಾಡಳಿತ ನಿರಂತರವಾಗಿ ಗಮನಿಸುತ್ತಿದೆ.

ಸಹಾಯವಾಣಿ ಸಂಖ್ಯೆಗಳು:

ವಿಜಯನಗರ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಸಂಖ್ಯೆಗಳ ಸಂಪರ್ಕಿಸಬಹುದು:

► ವಿಜಯನಗರ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ: 08394-295655

►ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ: 9480805700

►ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ: 080-22340676, 080-22253707

►ಟೋಲ್ ಫ್ರೀ ಸಂಖ್ಯೆ: 1070

ಮಧ್ಯಪ್ರಾಚ್ಯ ದೇಶಗಳಲ್ಲಿ ಇರುವ ಕರ್ನಾಟಕದ ನಿವಾಸಿಗಳು ಅಲ್ಲಿನ ಸ್ಥಳೀಯ ಸರ್ಕಾರಗಳ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಸಂಬಂಧಿತ ದೇಶದ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಬೇಕು ಅಥವಾ ‘ಸಾರಥಿ ಸಹಾಯತಾ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ವೀಸಾ ಸಮಸ್ಯೆಗಳಿದ್ದಲ್ಲಿ ಸಮೀಪದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬೇಕೆಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News