ವಿಜಯನಗರ | ಜೂ.17ರಂದು ಸಚಿವ ಸತೀಶ್ ಜಾರಕಿಹೊಳಿ ಜಿಲ್ಲಾ ಪ್ರವಾಸ
Update: 2025-06-16 22:00 IST
ಸತೀಶ್ ಜಾರಕಿಹೊಳಿ
ವಿಜಯನಗರ (ಹೊಸಪೇಟೆ), ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಜೂ.17 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯ ಬಳಿಕ ಮಧ್ಯಾಹ್ನ 3 ಗಂಟೆಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಪ್ರಗತಿಯಲ್ಲಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸಲಿದ್ದಾರೆ ಎಂದು ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ತಿಳಿಸಿದ್ದಾರೆ.