×
Ad

ವಿಜಯನಗರ | ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು

Update: 2025-04-25 18:30 IST

ವಿಜಯನಗರ(ಹೊಸಪೇಟೆ) : ಕಮಲಾಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 34 ವರ್ಷದ ಸಿದ್ದೇಶ್ ಎಂಬ ವ್ಯಕ್ತಿಯು ಕಾಣೆಯಾಗಿರುವ ಕುರಿತು  ಪ್ರಕರಣ ದಾಖಲಾಗಿದೆ ಎಂದು ಕಮಲಾಪುರ ಪೊಲೀಸ್ ಠಾಣೆ ತನಿಖಾಧಿಕಾರಿ ತಿಳಿಸಿದ್ದಾರೆ.

ವ್ಯಕ್ತಿ ಚಹರೆ : ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, 5.5 ಅಡಿ ಎತ್ತರ ಇದ್ದು, ಚಾಕೋಲೇಟ್ ಕಲರ್ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆಯನ್ನು ಮಾತನಾಡುತ್ತಾನೆ. 5 ಮತ್ತು 6 ವರ್ಷದಿಂದ ಮಾನಸಿಕ ಖಾಯಿಲೆ ಇದ್ದು, ಕೆಲ ಆಸ್ಪತ್ರೆಗಳಲ್ಲಿ ತೋರಿಸಿದರೂ ಗುಣಮುಖನಾಗಿರುವುದಿಲ್ಲ. ಫೆ. 19 ರಂದು ಬೆಳಿಗ್ಗೆ 7.30 ಕ್ಕೆ ಮನೆಯಿಂದ ಹೋದವನು ಮನೆಗೆ ವಾಪಾಸು ಬಂದಿರುವುದಿಲ್ಲ.

ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ ಅಥವಾ ಪೊಲೀಸ್ ನಿಯಂತ್ರಣ ಕೋಣೆ ದೂ. 08394241240, ಎಸ್‌ಡಿಪಿಒ 08394-224204, ಇಮೇಲ್ sdpohospetblr@ksp.gov.in ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News