ವಿಜಯನಗರ | ಪಿಎಸ್‌ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅನ್‌ಲೈನ್ ಅರ್ಜಿ ಆಹ್ವಾನ
Update: 2025-05-12 17:00 IST
ವಿಜಯನಗರ(ಹೊಸಪೇಟೆ) : 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವಜನರಿಗೆ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ನೀಡಲು ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಆಸಕ್ತ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಅರ್ಜಿಗಳನ್ನು ಮೇ.23 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೀಕ್ಷಿಸಿ ಅಥವಾ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ, ಆಯಾ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.