×
Ad

ವಿಜಯನಗರ | ಗಾದಿಗನೂರು ಬಳಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಅನಾಹುತ

Update: 2026-01-23 18:05 IST

ವಿಜಯನಗರ : ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ನಡೆದಿದ್ದು, ಭಾರಿ ಅನಾಹುತವೊಂದು ತಪ್ಪಿದೆ.

ಹೊಸಪೇಟೆಯಿಂದ ಬಳ್ಳಾರಿ ಕಡೆಗೆ ತೆರಳುತ್ತಿದ್ದ ಪೆಟ್ರೋಲ್ ಟ್ಯಾಂಕರ್‌ಗೆ ಹಿಂದಿನಿಂದ ಬಂದ ಲಘು ವಾಹನ ಢಿಕ್ಕಿ ಹೊಡೆದ ಪರಿಣಾಮ ಟ್ಯಾಂಕರ್ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪೆಟ್ರೋಲ್ ಟ್ಯಾಂಕರ್ ಜಿಂದಾಲ್ ಕಾರ್ಖಾನೆಗೆ ತಲುಪಬೇಕಾಗಿತ್ತು ಎಂದು ಚಾಲಕ ನಜೀರ್ (34) ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News