×
Ad

ವಿಜಯನಗರ | ಕಾಂಗ್ರೆಸ್ ಸರ್ಕಾರದ 2 ವರ್ಷದ ಸಾಧನ ಸಮಾವೇಶದ ಪೂರ್ವಭಾವಿ ಸಭೆ

Update: 2025-05-04 22:07 IST

ಹೊಸಪೇಟೆ (ವಿಜಯನಗರ) : ಹೊಸಪೇಟೆಯ ಹೊರ ವಲಯದಲ್ಲಿರುವ ಕೊಂಡನಾಯಕನ ಹಳ್ಳಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಾಧನ ಸಮಾವೇಶದ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ ಖಾನ್, ಬಳ್ಳಾರಿ ವಿಜಯನಗರ ಲೋಕಸಭಾ ಸದಸ್ಯರಾದ ಇ.ತುಕಾರಾಮ್ ಹಾಗೂ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸಿರಾಜ್ ಶೇಕ್ ಅವರ ನೇತೃತ್ವ ವಹಿಸಿದ್ದರು. 

ಸಭೆಯಲ್ಲಿ ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಮುಹಮ್ಮದ್ ಇಮಾಮ್ ನಿಯಾಜಿ, ವಿಜಯನಗರ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾದ ದಾದಾಪಿರ್ (ಬಾಹು), ಮಾಜಿ ಕರ್ನಾಟಕ ವಕ್ಸ್ ಮಂಡಳಿ ಅಧ್ಯಕ್ಷರಾದ ಅನ್ವ‌ರ್ ಭಾಷಾ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಮದ್ ಪಟೇಲ್‌, ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಮಂ ಪ್ರಶಾಂತ್‌, ಹಾಗೂ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರು ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕದ ಅಧ್ಯಕ್ಷರು, ನಗರಸಭೆ ಪುರಸಭೆ ಪಟ್ಟಣ ಪಂಚಾಯತ್ ಸದ್ಯಸರು ಹಾಗೂ ಕಾಂಗ್ರೆಸ್‌ ಮುಖಂಡರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News