ವಿಜಯನಗರ | ಜೂ.17 ರಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪ್ರಗತಿ ಪರಿಶೀಲನಾ ಸಭೆ
Update: 2025-06-16 22:02 IST
ವಿಜಯನಗರ (ಹೊಸಪೇಟೆ) : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರುಗಳು ಜೂ.17 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ ಹಾಗೂ ಮಧ್ಯಾಹ್ನ 2:30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಆರ್.ಟಿಇ-2009, ಪೋಕ್ಸೋ-2012 ಹಾಗೂ ಬಾಲ ನ್ಯಾಯ ಕಾಯಿದೆ-2015 ರ ಅನುಷ್ಠಾನದ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮ, ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಉಂಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.