×
Ad

ವಿಜಯನಗರ | ಕೂಡ್ಲಿಗಿಯಲ್ಲಿ ನ.9 ರಂದು 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ

Update: 2025-11-06 19:35 IST

ವಿಜಯನಗರ (ಹೊಸಪೇಟೆ) : ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ–ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮವನ್ನು ನ.9ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಕೂಡ್ಲಿಗಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜಲಸಂಪನ್ಮೂಲ ಇಲಾಖೆ ಮತ್ತು ಜಿಲ್ಲಾ ಆಡಳಿತದ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಝಮೀರ್ ಅಹ್ಮದ್ ಖಾನ್, ಎನ್.ಎಸ್.ಭೋಸರಾಜು ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಕೂಡ್ಲಿಗಿ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ದಿನೇಶ್ ಗುಂಡೂರಾವ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವಾನಂದ ಎಸ್. ಪಾಟೀಲ್, ಶರಣಬಸಪ್ಪ ದರ್ಶನಾಪುರ, ಈಶ್ವರ್ ಬಿ. ಖಂಡ್ರೆ, ಎನ್.ಚೆಲುವರಾಯಸ್ವಾಮಿ,  ಎಸ್.ಎಸ್.ಮಲ್ಲಿಕಾರ್ಜುನ್, ರಹೀಂ ಖಾನ್, ಸಂತೋಷ್ ಎಸ್.ಲಾಡ್,  ಡಾ.ಶರಣಪ್ರಕಾಶ್ ಆರ್.ಪಾಟೀಲ್, ಆರ್.ಬಿ.ತಿಮ್ಮಾಪುರ, ಕೆ.ವೆಂಕಟೇಶ್, ಶಿವರಾಜ ಎಸ್.ತಂಗಡಗಿ, ಡಿ.ಸುಧಾಕರ್,  ಬಿ.ಎಸ್.ಸುರೇಶ್,  ಲಕ್ಷ್ಮೀ ಆರ್.ಹೆಬ್ಬಾಳ್ಳರ್, ಮಂಕಾಳ್ ಎಸ್.ವೈದ್ಯ, ಎಸ್.ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಶಾಸಕರಾದ ಬಸವರಾಜ ರಾಯರೆಡ್ಡಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಮತ್ತು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೇವರ್ಗಿ ಕ್ಷೇತ್ರ (ವಿಧಾನ ಸಭೆ) ಶಾಸಕ ಡಾ.ಅಜಯ್ ಧರ್ಮಸಿಂಗ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಗೌರವಾನ್ವಿತ ಉಪಸ್ಥಿತರಾಗಿ ಬಳ್ಳಾರಿ ಮತ್ತು ವಿಜಯನಗರ ಸಂಸದ ಈ.ತುಕಾರಾಮ್, ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಹೊಸಪೇಟೆ ಶಾಸಕ ಹೆಚ್.ಆರ್.ಗವಿಯಪ್ಪ, ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ ನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ, ಹೂವಿನಹಡಗಲಿ ಶಾಸಕ ಎಲ್.ಕೃಷ್ಣನಾಯಕ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಬಿ. ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಕೂಡ್ಲಿಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಮೂರ್ತಿ.ಕೆ, ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕೂಡ್ಲಿಗಿ ತಾಲೂಕು ಅಧ್ಯಕ್ಷ ಶೇಕ್ ಮುಹಮ್ಮದ್ ಜಿಲಾನ್ ಉಪಸ್ಥಿತಿ ಇರಲಿದ್ದಾರೆ. ವಿಶೇಷ ಅಹ್ವಾನಿತರಾಗಿ ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಇವರು ಆಗಮಿಸಲಿದ್ದಾರೆ.

ಗೌರವಾನ್ವಿತ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಾಗೂ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಕೆ.ಪವಿತ್ರ, ಇಂಧನ ಹಾಗೂ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಲಬುರಗಿ ವಿಭಾಗ ಪ್ರಾದೇಶಿಕ ಆಯುಕ್ತರು ಜಹೀರಾ ನಸೀಂ, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಎಜಾಜ್ ಹುಸೇನ್, ಮತ್ತು ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ ಉಪಸ್ಥಿತಿ ಇರಲಿದ್ದಾರೆ. .

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News