×
Ad

ವಿಜಯನಗರ | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಾನವ‌ ಸರಪಳಿ ನಿರ್ಮಿಸಿ ಪ್ರತಿಭಟನೆ

Update: 2025-07-11 17:10 IST

ವಿಜಯನಗರ : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಚಿತ್ತವಾಡ್ಗಿ ಮಸೀದಿಯ ಮುಂದೆ ಅಂಜುಮನ್ ಕಮಿಟಿ ಮತ್ತು ಜಮಾಅತೆ ಇಸ್ಲಾಮಿ ಹಿಂದ್ ಕಮಿಟಿ ನೇತೃತ್ವದಲ್ಲಿ ನಡೆದ ಮೌನ ಪ್ರತಿಭಟನೆಯಲ್ಲಿವಕ್ಫ್ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ನಾಮಫಲಕವನ್ನು ಹಿಡಿದು ಮಾನವ‌ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಅಸ್ಲಾಂ ಮಳಗಿ, ಜಮಾಅತೆ ಇಸ್ಲಾಮಿ ಹಿಂದ್ ಅಧ್ಯಕ ಮುಹಮ್ಮದ್ ಅಝೀಝ್ ಮುಲ್ಲಾ, ಹುಡಾ ಅಧ್ಯಕ್ಷ ಮುಹಮ್ಮದ್ ಇಮಾಮ್ ನಿಯಾಜಿ, ಲಿಯಾಖತ್ಅಲಿ, ನಿಯಾಜಿ, ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದವರು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News