ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ಟೋಬರ್ 10ರಂದು ಅಕ್ರಮವಾಗಿ ಸಾಗಿಸುತ್ತಿದ್ದ 2,38,500ರೂ. ಮೌಲ್ಯದ ಒಟ್ಟು 106 ಕ್ವಿಂಟಲ್ ಪಡಿತರ ಅಕ್ಕಿ ಮೂಟೆಗಳು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹೂವಿನಹಡಗಲಿ ತಾಲೂಕಿನ ಆಹಾರ ನಿರೀಕ್ಷಕ ನವೀನ್ ಕುಮಾರ್ ಅವರು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಝ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor