ವಿಜಯನಗರ | ಜೂ.22 ರವರೆಗೆ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಅವಧಿ ವಿಸ್ತರಣೆ
Update: 2025-06-16 21:21 IST
ಸಾಂದರ್ಭಿಕ ಚಿತ್ರ
ವಿಜಯನಗರ(ಹೊಸಪೇಟೆ) : 2025-26ನೇ ಸಾಲಿನ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ ಜೂ.9 ರಿಂದ ಜೂ.22 ರವರೆಗೆ ಕಾಲಾವಧಿಯನ್ನು ವಿಸ್ತರಿಸಿ ಆನ್‌ಲೈನ್ ಮೂಲಕವೂ ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶಾಕಿ ಅಹ್ಮದ್ ಅವರು ತಿಳಿಸಿದ್ದಾರೆ.
ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಗ್ರಾಮ ಒನ್ ಕೇಂದ್ರಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಇದಲ್ಲದೇ ಅನ್‌ಲೈನ್ ಮೂಲಕ https://schedulecastesurvey.karnataka.gov.in/selfdeclaration ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ಜೂ.22 ರವರೆಗೆ ವಿಸ್ತರಿಸಲಾಗಿದೆ. ಅಯಾ ಸ್ಥಳಗಳಲ್ಲಿ ವಿಧಾನದ ಮೂಲಕ ಸಮೀಕ್ಷೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.