ವಿಜಯನಗರ | ಲಸಿಕೆ ವಂಚಿತರಿಗೆ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ
ವಿಜಯನಗರ(ಹೊಸಪೇಟೆ) : ಮೇ 26 ರಿಂದ 31ರವರೆಗೆ ಹಾಗೂ ಜೂ 23 ರಿಂದ 28ರವರೆಗೆ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಲಸಿಕೆ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಜಂಬಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಲ್ಲಹಳ್ಳಿ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸೋಮವಾರ ಮಾತನಾಡಿದರು, ಜಿಲ್ಲೆಯ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಅದರಲ್ಲೂ ಲಸಿಕೆ ವಂಚಿತ ಮಕ್ಕಳಿಗೆ ವಿಶೇಷ ಲಸಿಕಾ ಅಭಿಯಾನದ ಮೂಲಕ ಲಸಿಕೆಯನ್ನು ನೀಡಲಾಗುವುದು. ಪೋಷಕರು ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಮುಂದಾಗಬೇಕು ಎಂದರು.
ಈ ವೇಳೆ ತಾಲೂಕು ಅರೋಗ್ಯ ಅಧಿಕಾರಿ ಡಾ.ವಿನೋದ, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ, ಜಿಲ್ಲಾ ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಲತಾ, ಸಮುದಾಯ ಅರೋಗ್ಯ ಅಧಿಕಾರಿ ನಂದಿನಿ ಸೇರಿದಂತೆ ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.