ವಿಜಯನಗರ | ಎಸೆಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಶೇ.96 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Update: 2025-05-18 17:46 IST
ವಿಜಯನಗರ (ಹೊಸಪೇಟೆ) : ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.96 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ಒಲಂಗಣ ಕ್ರೀಡಾಂಗಣದಲ್ಲಿ ಬಂಜಾರ ಸ್ನೇಹಜೀವಿ ಬಳಗದಿಂದ ಎಸೆಸೆಲ್ಸಿ ಮತ್ತು ಪಿಯುಸಿ ಶೇ.96 ಅಂಕವನ್ನು ಪಡೆದ 10 ಬಂಜಾರ ಸಮಾಜದ ವಿದ್ಯಾರ್ಥಿಗಳಿಗೆ ಸಚಿವರು ಒಂದು ಲಕ್ಷ ರೂಪಾಯಿ ಬಹುಮಾನ ನೀಡಿದರು.
ಕಾರ್ಯಕ್ರಮದಲ್ಲಿಬಂಜಾರ ಸಮಾಜದ ಗುರುಗಳಾದ ಶಿವಪ್ರಕಾಶ್ ಮಹಾರಾಜ್, ತಿಪ್ಪೇಸ್ವಾಮಿ, ಬಂಜಾರ ಸಮಾಜದ ನಾಯಕರು ಅನಂತ್ ನಾಯಕ್, ಕೆಎಂಎಫ್ ಅಧ್ಯಕ್ಷ ಭೀಮ ನಾಯಕ್, ಯುವ ಕಾಂಗ್ರೆಸ್ ವಿಜಯನಗರ ಜಿಲ್ಲಾ ಅಧ್ಯಕ್ಷ ಅಶೋಕ್ ನಾಯಕ್ ಉಪಸ್ಥಿತರಿದ್ದರು.