×
Ad

ವಿಜಯನಗರ | ಛಲವಾದಿ ಸಮುದಾಯದ ಮುಂದಿರುವ ಸಮಸ್ಯೆಗಳ ಕುರಿತು ʼಚಿಂತನ ಮಂಥನʼ ಕಾರ್ಯಕ್ರಮ

Update: 2025-09-08 20:08 IST

ವಿಜಯನಗರ: ಸೆ.7ರಂದು ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ಛಲವಾದಿ ಸಮುದಾಯದ ಮುಂದಿರುವ ಸಮಸ್ಯೆಗಳ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಮಹಾಸಭಾ ಜಿಲ್ಲಾಧ್ಯಕ್ಷರಾದ ಸೋಮಶೇಖರ ಬಣ್ಣದಮನೆ ರವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಸಮುದಾಯದ ಸಾವಿರಾರು ಪ್ರತಿನಿಧಿಗಳು ಭಾಗವಹಿಸಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪೋಟೋಕ್ಕೆ ಹೂವುಗಳನ್ನು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.

ಪ್ರಾಧ್ಯಾಪಕರಾದ ಡಾ.ಎನ್.ಚಿನ್ನಸ್ವಾಮಿ ಸೋಸಲೆ, ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದರು. ಅರವಿಂದ ಇ ಘಟ್ಟಿ ಸ್ವಾಗತಿಸಿದರು. ಮಹಾಸಭಾ ಜಿಲ್ಲಾಧ್ಯಕ್ಷರಾದ ಸೋಮಶೇಖರ ಬಣ್ಣದ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News