×
Ad

ವಿಜಯನಗರ | ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Update: 2025-09-30 22:28 IST

ವಿಜಯನಗರ (ಹೊಸಪೇಟೆ) : ಔಷಧಿಗಳ ದುರ್ಬಳಕೆ ತಡೆಗಟ್ಟಲು ಮತ್ತು ಔಷಧ ಬಳಕೆಯ ಕುರಿತು ಜಾಗೃತಿ ಮೂಡಿಸಲು ಫಾರ್ಮಸಿಸ್ಟ್ ದಿನವು ಪೂರಕವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರನಾಯ್ಕ ಹೇಳಿದರು.

ನಗರದ ಜಿಲ್ಲಾ ಒಳಕ್ರೀಡಾಂಗಣದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಆಯೋಜಿಸಿದ ವಿಶ್ವ ಫಾರ್ಮಸಿಸ್ಟ್ ದಿನಾಚರಣೆಯ ಮತ್ತು ನಿರಂತರ ಕಲಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಾಯಕ ಔಷಧ ನಿಯಂತ್ರಕರಾದ ಜಿ.ವಿ. ನಾರಾಯಣ ರೆಡ್ಡಿ ಉಪನ್ಯಾಸ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಭಾಗವಾರು ಹಿರಿಯ ಫಾರ್ಮಸಿಸ್ಟ್ ಪ್ರಶಸ್ತಿ ಪಡೆದ ಜನಾರ್ಧನ ಮತ್ತು ಎ.ಗಿರೀಧರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ವೇಳೆ ಔಷಧಿ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಎಂ. ಬಸವರಾಜ ರೆಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ಜೆ. ಸಂತೋಷ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ವಾಹಿದ್ ತಂಬ್ರಹಳ್ಳಿ, ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜಶೇಖರ್ ಸ್ವಾಮಿ, ಮಲ್ಲಿಕಾರ್ಜುನ ಕೊತ್ತೂರು, ಚಿದಾನಂದ ಸ್ವಾಮಿ, ಪ್ರಶಾಂತ್ ಪೂಜಾರ್, ಹೊಸಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್ ವೇಮಲ್, ಉಪಾಧ್ಯಕ್ಷರಾದ ಪಿ. ಸುಬ್ರಮಣ್ಯ, ಪದಾಧಿಕಾರಿಗಳಾದ ಜಾವೇದ್ ಮಹಮ್ಮದ್, ಪ್ರಕಾಶ್ ಜಾಲಿ, ಪ್ರಶಾಂತ್, ಕಿರಣ್ ಕಲಾಲ್, ಫಾರ್ಮಸಿ ಕಾಲೇಜಿನ ಪ್ರಾಚಾರ್ಯ ಶಂಕ್ರಯ್ಯ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News