×
Ad

ವಿಜಯನಗರ | ಆರೋಗ್ಯಕರ ಜೀವನ ಸಾಗಿಸಲು ಯೋಗ ಸಹಕಾರಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್

Update: 2025-06-21 23:10 IST

ವಿಜಯನಗರ (ಹೊಸಪೇಟೆ) : ಆರೋಗ್ಯಕರ ಜೀವನ ಸಾಗಿಸಲು ಮತ್ತು ದೈಹಿಕವಾಗಿ ಸದೃಢವಾಗಲು ಯೋಗವು ಮುಖ್ಯ ಪಾತ್ರ ವಹಿಸಲಿದೆ. ಪ್ರತಿಯೊಬ್ಬರೂ ನಿತ್ಯ ಯೋಗಾಭ್ಯಾಸ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸಲಹೆ ನೀಡಿದರು.

ನಗರದ ಸ್ವಾತಂತ್ರ್ಯ ಉದ್ಯಾನವನ(ಫ್ರೀಡಂ ಪಾರ್ಕ್)ದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಸ್ಕೌಟ್ಸ್ & ಗೈಡ್ಸ್ ಘಟಕ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ, ಪತಂಜಲಿ ಯೋಗ ಸಂಸ್ಥೆ, ಎ.ಎಫ್.ಐ. ಮತ್ತು ವಿವಿಧ ಯೋಗ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಅವರು ಮಾತನಾಡಿದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೊಸಪೇಟೆ ನಗರಸಭೆಯ ಅಧ್ಯಕ್ಷರಾದ ರೂಪೇಶ್ ಕುಮಾರ್ ಮಾತನಾಡಿದರು.

ಯೋಗ ಗುರುಗಳಾದ ಕಿರಣ್ ಜೀ ಮತ್ತು ರಾಜೇಶ್ ಕರ್ವಾ ವಿವಿಧ ಆಸನಗಳನ್ನು ಮಾಡಿಸಿದರು.

ಈ ವೇಳೆ ಪ್ರಭಾರಿ ಬಿಇಒ ಶೇಖರಪ್ಪ ಹೊರಪೇಟೆ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮುನಿವಾಸುದೇವರೆಡ್ಡಿ, ಡಾ.ಕೆ.ಹೆಚ್.ಗುರುಬಸವರಾಜ, ಡಾ.ಹೆಚ್.ಕೊಟ್ರಮ್ಮ, ಡಾ.ಸರಸ್ವತಿ, ಡಾ.ಹೇಮ, ಡಾ.ಹಾಲಮ್ಮ, ಆಕಾಶವಾಣಿಯ ನಾಗರತ್ನ, ಪತಂಜಲಿ ಯೋಗ ಸಂಸ್ಥೆಯ ಜಿಲ್ಲಾ ಉಸ್ತುವಾರಿ ಎಫ್.ಡಿ.ಹಳ್ಳಿಕೇರಿ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಅಧ್ಯಕ್ಷರಾದ ಮಾನಸ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ಕಾರ್ಯಕ್ರಮದಲ್ಲಿ 1000ಕ್ಕೂ ಹೆಚ್ಚು ವಿವಿಧ ಶಾಲಾ ಕಾಲೇಜಿನ ಮಕ್ಕಳು, ವಿವಿಧ ಯೋಗ ಸಂಸ್ಥೆಗಳ ಯೋಗ ಪಟುಗಳು, ಆಯುಷ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News